ವಿಶ್ವಕರ್ಮ ಸಮುದಾಯಗಳಿಗೆ ವಿವಿಧ ಯೋಜನೆಯ ಸಾಲ ಸೌಲಭ್ಯ

ದಾವಣಗೆರೆ, ಆ. 22-  ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ, ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಅರ್ಜಿಯನ್ನು ಸಲ್ಲಿಸಲು  https://www.kaushalkar.com  ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ.  ಇದೇ ದಿನಾಂಕ 31 ಕೊನೆಯ ದಿನವಾಗಿದೆ.

error: Content is protected !!