ದಾವಣಗೆರೆ, ಆ. 25 -000 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭೆ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದು, ಹಾವೇರಿ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಅವರಿಗೆ ವಹಿಸಿದ್ದಾರೆ.
ಹೆಚ್. ಆಂಜನೇಯ ಅವರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ, ಡಿ. ಬಸವರಾಜ್ ಅವರಿಗೆ ಹಾವೇರಿ ಜಿಲ್ಲೆಯ ಶಿಗ್ಗಾಂವ್, ಹಾವೇರಿ ಮತ್ತು ಬ್ಯಾಡಗಿ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಲಾಗಿದೆ.