ಹರಿಹರ, ಅ. 25 – ಹರಿಹರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬರುವ ಸೆಪ್ಟೆಂಬರ್ 2 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ನಗರಸಭೆ ಅಧ್ಯಕ್ಷೆ ನಿಂಬಕ್ಕ ಚಂದಪೂರ್ ಮತ್ತು ಉಪಾಧ್ಯಕ್ಷ ಕೆ.ಜಿ. ಸಿದ್ದೇಶ್ ರವರಿಂದ ತೆರವಾದ ಸ್ಥಾನಕ್ಕೆ ಸರ್ಕಾರ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡ ಮಹಿಳೆ (ಎಸ್ಟಿ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮನ್ಯ ವರ್ಗದವರಿಗೆ ಮೀಸಲಾತಿ ಘೋಷಣೆ ಮಾಡಿದ್ದು, ಅದರ ಅನ್ವಯದಂತೆ ಸೆಪ್ಟೆಂಬರ್ 2 ರಂದು ಚುನಾವಣೆ ನಡೆಯಲಿದೆ.