ದಾವಣಗೆರೆ, ಆ.26- ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಶ್ರೀ ಕೃಷ್ಣನ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಗಂಗಾಧ ರಸ್ವಾಮಿ ಜಿ.ಎಂ ಅವರು ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿ ಶ್ರೀ ಕೃಷ್ಣ ಜಯಂತಿಯ ಶುಭಾಶಯ ಕೋರಿದರು.
ಅಪರ ಜಿಲ್ಲಾಧಿಕಾರಿ ಲೋಕೇಶ್. ಪಿ.ಎನ್, ಆಹಾರ ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ್, ನಿವೃತ್ತ ಪ್ರಾಚಾರ್ಯ ಶ್ರೀನಿವಾಸ್, ಯಾದವ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಗಂಗಾಧರಪ್ಪ, ಯಾದವ ಸಮಾಜ ಬಾಂಧವರು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.