ವೀರಶೈವ ಮಹಾಸಭಾ ಚುನಾವಣೆ: ಅತಿಹೆಚ್ಚು ಮತಗಳಿಂದ 27 ಅಭ್ಯರ್ಥಿಗಳ ಜಯ

ದಾವಣಗೆರೆ, ಆ. 27- ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯ ರುಗಳ ಚುನಾವಣೆಯು ಆ. 25 ರಂದು ಮುಕ್ತಾಯಗೊಂಡಿದ್ದು, ಕರ್ನಾಟಕ ರಾಜ್ಯದಿಂದ 30, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ತಲಾ 5ಸದಸ್ಯರಂತೆ ಕೇಂದ್ರ ಕಾರ್ಯಕಾರಿ ಸಮಿತಿಯ ಒಟ್ಟು 55 ಸದಸ್ಯರು ಮತ್ತು ಕರ್ನಾಟಕ, ಕೇರಳ, ಆಂಧ್ರಪ್ರದೇಶ ರಾಜ್ಯ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿಯ  ಸದಸ್ಯರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಾಹಕ ಸಮಿತಿಯ 27 ಸಾಮಾನ್ಯ ಸದಸ್ಯರುಗಳಿಗೆ ಮಾತ್ರ ಆ. 25 ರಂದು ರಾಜ್ಯದ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಮತದಾನ ನಡೆದು, ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಗಳೂ, ಸಚಿವರಾದ ಈಶ್ವರ ಖಂಡ್ರೆ ಮತ್ತು ನೂತನ ರಾಜ್ಯಾಧ್ಯಕ್ಷ ಶಂಕರ ಎಂ. ಬಿದರಿ ಅವರ ನೇತೃತ್ವದ ಎಲ್ಲಾ 27 ಅಭ್ಯರ್ಥಿಗಳು ಅತಿ ಹೆಚ್ಚು ಮತಗಳನ್ನು ಗಳಿಸಿ ಜಯಶಾಲಿಗಳಾಗಿದ್ದಾರೆ.

ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿಗಳಿಗೆ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಅಭಿನಂದಿಸಿದ್ದಾರೆ.

error: Content is protected !!