ಹರಪನಹಳ್ಳಿ, ಆ.28 – ತಾಲೂಕಿನ ಕಡಬಗೇರಿಯ ಹಿರಿಯ ಪ್ರಾಥಮಿಕ ಶಾಲೆಗೆ ಸಾಸ್ವೇಹಳ್ಳಿಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ ಖೋಖೋ ಪ್ರಥಮ, ರಿಲೇ ಪ್ರಥಮ, ಕಬಡ್ಡಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗದಲ್ಲಿಯೂ ಖೋಖೋ ಪ್ರಥಮ, ರಿಲೇ ಪ್ರಥಮ ಹಾಗೂ ಕೆಲ ಆಟೋಟಗಳಲ್ಲಿ ಕೂಡ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಎ.ಅಶೋಕ್, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಹಳೆಯ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.