ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದ ಜಿಲ್ಲಾ ಕೋರ್ಟ್ ಭವನದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಕೆ. ದಾದಾಪೀರ್ ಬರೆದಿರುವ `ಲಾಯರ್ಸ್ ರೆಡಿ ರೆಕ್‌ನರ್’ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್ ಅಧ್ಯಕ್ಷತೆ ವಹಿಸುವರು.
1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್.ಪ್ರವೀಣ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಎಸ್‌ಟಿಎಫ್‌ಸಿಗಳಾದ ಶ್ರೀರಾಮ ನಾರಾಯಣ ಹೆಗಡೆ, ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಶಿವಪ್ಪ ಗಂಗಪ್ಪ ಸಲಗರೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ಎಂ. ನಿವೇದಿತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.