ಕ್ಯಾಸಿನಕೆರೆ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ತಾಲ್ಲೂಕು ಮಟ್ಟಕ್ಕೆ ಆಯ್ಕೆ

ಕ್ಯಾಸಿನಕೆರೆ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ತಾಲ್ಲೂಕು ಮಟ್ಟಕ್ಕೆ ಆಯ್ಕೆ

ಚನ್ನಗಿರಿ, ಆ. 28-  ದಿನಾಂಕ 24.08.2024 ರಂದು ಹೊನ್ನಾಳಿ  ಸ್ಟೇಡಿಯಂನಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾ ಕೂಟದಲ್ಲಿ ಕೆಂಗಾಪುರ  ಶ್ರೀರಾಮಲಿಂಗೇಶ್ವರ ವಿದ್ಯಾ ಸಂಸ್ಥೆ (ರಿ)   ಆಶ್ರಯದಲ್ಲಿ ನಡೆಯುತ್ತಿರುವ ಕ್ಯಾಸಿನಕೆರೆ ಗ್ರಾಮದ ಶ್ರೀ ವೀರಭದ್ರೇಶ್ವರ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಗಳೆರಡೂ  ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನದೊಂದಿಗೆ ಜಯಗಳಿಸಿ, ಚನ್ನಗಿರಿ ತಾಲ್ಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ವಿಜೇತ ಮಕ್ಕಳೆಲ್ಲರಿಗೂ ಹರನಹಳ್ಳಿ-ಕೆಂಗಾಪುರ ಮಠದ ಶ್ರಿ ರಾಮಲಿಂಗೇಶ್ವರ ಮಹಾ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಅಭಿನಂದಿಸಿದ್ದಾರೆ.

error: Content is protected !!