ಪಟ್ಟಣದ ಭಾನು ಹೈ-ಟೆಕ್ ಶಾಲೆಯಲ್ಲಿ ಇಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆವರೆಗೆ ಮಲೇಬೆನ್ನೂರು ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಆರ್‌ಪಿ ಕರಿಬಸಪ್ಪ ಬಸಲಿ ತಿಳಿಸಿದ್ದಾರೆ. ಆ.30 ರ ಶುಕ್ರವಾರ ಲಯನ್ಸ್ ಶಾಲೆಯಲ್ಲಿ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.
December 22, 2024