ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಆಸ್ತಿಗಳ ನೋಂದಣಿಗೆ ಅವಕಾಶ

ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಆಸ್ತಿಗಳ ನೋಂದಣಿಗೆ ಅವಕಾಶ

ದಾವಣಗೆರೆ, ಆ. 29 –   ಆಸ್ತಿಗಳ ನೋಂದಣಿಯನ್ನು ಯಾವ ಸ್ಥಳದಲ್ಲಾದರೂ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಿದ್ದು ಬರುವ ಸೆಪ್ಟೆಂಬರ್ 2 ರಿಂದ ಜಿಲ್ಲೆಯೊಳಗೆ ಯಾವುದೇ ತಾಲ್ಲೂಕಿನಲ್ಲಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದ ಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ, ಸಾರ್ವಜನಿಕರು ಸಮೀಪದಲ್ಲಿ ರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲ ಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭ ವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ, ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆ ಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

  ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ನೊಂದಣಿ ಮಾಡಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!