ರೈತ ಸಂಘದ ವಿರೋಧ
ದಾವಣಗೆರೆ, ಆ.29- ರೈತರ ಕೃಷಿ ಪಂಪ್ ಸೆಟ್ಗಳಿಗೆ ಆಧಾರ್ ನಂಬರ್ ಅಳವಡಿಕೆಗೆ ರಾಜ್ಯ ರೈತ ಸಂಘ ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಈ ಹಿಂದಿನ ಮತ್ತು ಪ್ರಸ್ತುತ ಸರ್ಕಾರಗಳು ಒಂದಲ್ಲ ಒಂದು ರೂಪದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಂಜುನಾಥ್ ತಿಳಿಸಿದ್ದಾರೆ.
ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಪ್ರತಿ ರೈತನಿಗೆ 10 ಹೆಚ್ಪಿ ವರೆಗೂ ಮಾತ್ರ ಉಚಿತ ವಿದ್ಯುತ್ ನೀಡಲಾಗುವುದು. ಉಳಿದ ವಿದ್ಯುತ್ ಬಳಕೆಗೆ ಶುಲ್ಕ ಬರಿಸಬೇಕು ಎಂದು ಕಾಯಿದೆ ಜಾರಿಗೆ ಮಾಡಲಾಗಿತ್ತು. ಅದರ ಭಾಗವಾಗಿ ಅಂದಿನ ಸರ್ಕಾರ ರೈತರ ಎಲ್ಲಾ ಕೃಷಿ ಪಂಪ್ ಸೆಟ್ಗಳಿಗೆ ಆಧಾರ್ ಜೋಡಣೆಯಾಗಬೇಕೆಂದು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಎಲ್ಲಾ ಕೃಷಿ ಪಂಪ್ಸೆಟ್ಗಳ ಆರ್ಆರ್ ನಂಬರ್ಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಸಂಚು ರೂಪಿಸಿತ್ತು. ಇದರ ಮುಖ್ಯ ಉದ್ದೇಶ ಒಬ್ಬ ರೈತನಿಗೆ 10 ಹೆಚ್ಪಿ ವರೆಗೂ ಮಾತ್ರ ಉಚಿತ ವಿದ್ಯುತ್ ನೀಡುವುದು ಹಾಗೂ ಉಳಿದ ವಿದ್ಯುತ್ ಬಳಕೆಗೆ ಶುಲ್ಕ ನಿಗಧಿಪಡಿಸುವುದೇ ಆಗಿದೆ ಎಂದು ಮಂಜುನಾಥ್ ಆರೋಪಿಸಿದ್ದಾರೆ.