ಅಂಚೆ ಇಲಾಖೆಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ. 1 – ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವುದು ಇದರ ಉದ್ದೇಶವಾಗಿದೆ. 2023-24 ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾ  ರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾ ರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಾಡಿದ್ದು ದಿನಾಂಕ 3 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ  www.indiapost.gov.in     ಅಥವಾ  www.karnatakapost.gov.in     8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬ ಹುದೆಂದು ಅಂಚೆ ಇಲಾಖೆ ಅಧೀಕ್ಷಕ ಚಂದ್ರಶೇಖರ ತಿಳಿಸಿದ್ದಾರೆ.

error: Content is protected !!