ಹರಪನಹಳ್ಳಿ ತಾಲ್ಲೂಕು, ಚಿಗಟೇರಿ ಗ್ರಾಮದ ಶಿವನಾರದಮುನಿ ಸ್ವಾಮಿಯ ಕಡೇ ಶ್ರಾವಣ ಶನಿವಾರದ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವು ಇಂದು ನಡೆಯಲಿದೆ.
ಮುಂಜಾನೆ ರುದ್ರಾಭಿಷೇಕ, ನಂತರ ಹೊಸ ಮಡಿ ವಿಶೇಷ, ಹೂವಿನ ಅಲಂಕಾರದೊಂದಿಗೆ ವಿಶೇಷ ಪೂಜೆಯು ಬೆಳಿಗ್ಗೆ 9 ರಿಂದ 10 ರವರೆಗೆ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಮಹಾಮಂಗಳಾರತಿಯೊಂದಿಗೆ ವಿಶೇಷ ಪೂಜೆ ನೆರವೇರುವುದು.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಸುಮಾರು 25 ಸಾವಿರ ಜನರಿಗೆ ಪ್ರಸಾದದ ವ್ಯವಸ್ಥೆಯನ್ನು ದೇವಸ್ಥಾನ ಸಮಿತಿ ವತಿಯಿಂದ ಏರ್ಪಡಿಸಲಾಗಿದೆ ಎಂದು ಶ್ರೀ ಶಿವನಾರದಮುನಿ ದೇವಸ್ಥಾನ ಸಮಿತಿಯ ಸಂಸ್ಥಾಪಕ ಅಧ್ಯಕ್ಷ
ಅಣಬೇರು ರಾಜಣ್ಣ ತಿಳಿಸಿದ್ದಾರೆ.