1008 ಶ್ರೀ ಸತ್ಯನಾರಾಯಣ ಸ್ವಾಮಿ ವ್ರತವನ್ನು ಎಸ್.ಕೆ.ಪಿ. ರಸ್ತೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಏರ್ಪಡಿಸಲಾಗಿದೆ ಎಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ರಿಂದ ಶ್ರೀ ಗಣಪತಿ ಸ್ಮರಣೆ, ಶ್ರೀ ಜನಾರ್ಧನ ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ, ಅಲಂಕಾರ, ಬೆಳಿಗ್ಗೆ 8.45 ರಿಂದ ಶ್ರೀ ಮಹಾಗಣಪತಿ – ಶ್ರೀ ನವಗ್ರಹ ಪೂಜೆ, ಶ್ರೀ ಸತ್ಯನಾರಾಯಣ ವ್ರತ ಪೂಜೆ, ಸಂಜೆ 7 ರಿಂದ ರಥಾರೋಹಣ, ಉಯ್ಯಾಲೆ ಸೇವೆ, ಜರುಗಲಿದೆ.
ಸರ್ವ ಸದಸ್ಯರ ಸಭೆ : ಇದೇ ಸಂದರ್ಭದಲ್ಲಿ ಸಂಜೆ 5 ಗಂಟೆಗೆ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಸರ್ವ ಸದಸ್ಯರ ಸಭೆಯು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕಾಸಲ್ ಎಸ್. ವಿಠಲ್ ಶ್ರೀಮತಿ ಸುನಂದಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿದೆ.