ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ - Janathavani - Davanagere News Paper

ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ

ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ

ಡಿ. ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಬೆನಕನ ಅಮಾವಾಸ್ಯೆ ಪ್ರಯುಕ್ತ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಅಮ್ಮನವರಿಗೆ  108 ಲೀಟರ್ ಹಾಲಿನ ಅಭಿಷೇಕ, ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇ ಶ್ವರಿಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಅರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.  ವಸಂತ ಬಾಯಿ ವಸಂತರಾವ್ ಸಬಾಳೆ ಮತ್ತು  ಕುಟುಂಬ ದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!