ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ದಾವಣಗೆರೆ, ಸೆ.3- ದಾವಣಗೆರೆಯ ಕೆಲವು ಭಾಗಗಳಲ್ಲಿ ಮೇಲ್ದರ್ಜೆಗೇರಿಸುವ ಬಾಕಿ ಉಳಿದ ಷಟ್ಪಥ ರಸ್ತೆಯ ಕಾಮ ಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರಕ್ಕೆ ಹೊಂದಿಕೊಂಡ ಹಾಗೂ ಕುಂದುವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿಯ ಸರ್ವೀಸ್ ರಸ್ತೆ ಬಾಕಿ ಉಳಿದಿದ್ದು, ಈ ಭಾಗದಲ್ಲಿ ಅಪ ಘಾತಗಳು ಹೆಚ್ಚು ಸಂಭವಿಸುತ್ತಿವೆ. ಆದ್ದರಿಂದ ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡುವಂತೆ ಹೇಳಿದರು.
ಕಾನೂನು ಪ್ರಕಾರ ರೈತರಿಗೆ ಸಿಗಬೇಕಾದ ಪರಿಹಾರ ಮೊತ್ತವನ್ನು ಪಾವತಿಸಿ ಅಥವಾ ಠೇವಣಿ ಇಟ್ಟು ಕಾಮಗಾರಿ ಮುಂದುವರೆಸಿ. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೇಳಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಶೀಲ್ದಾರ್ ಅಶ್ವತ್ಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.