ದಾವಣಗೆರೆ, ಸೆ.3- ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ಜಿಲ್ಲಾಡಳಿತದ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೊಡಮಾಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 18 ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ನಾಡಿದ್ದು ದಿನಾಂಕ 5ರ ಗುರುವಾರ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತದಿಂದ ಏರ್ಪಾಡಾಗಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ, ಗೌರವಿಸಲಾಗುತ್ತದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ
ದಾವಣಗೆರೆ ಉತ್ತರ ವಲಯ : ಕದರಪ್ಪನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಬಿ.ಎಸ್. ಉಷಾ.
ದಾವಣಗೆರೆ ದಕ್ಷಿಣ ವಲಯ : ದಾವಣಗೆರೆಯ ವೆಂಕಟೇಶ್ವರ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹೆಚ್.ಆರ್. ಪ್ರಕಾಶ್.
ಚನ್ನಗಿರಿ : ಚನ್ನಗಿರಿಯ ಫಾರೂಕಿ ನಗರದಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಆಶಿಯಾ ಫರ್ವಿನ್.
ಹರಿಹರ : ಹರಿಹರ ತಾಲ್ಲೂಕಿನ ಧೂಳೆಹೊಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಯಶೋಧ ಬಾರ್ಕಿ.
ಜಗಳೂರು : ಜಗಳೂರು ತಾಲ್ಲೂಕಿನ ಉದ್ದಬೋರನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿ.ಎಸ್.ಸಂಗಮೇಶ್.
ಹೊನ್ನಾಳಿ : ಹೊನ್ನಾಳಿ ತಾಲ್ಲೂಕಿನ ಹೊಳೆಮಾದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಸಿ. ಶಿವಪ್ರಸಾದ್ ಕುಮಾರ್.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ
ದಾವಣಗೆರೆ ಉತ್ತರ ವಲಯ : ದಾವಣಗೆರೆ ಕೆ.ಆರ್. ಮಾರ್ಕೆಟ್ನಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ರೇಷ್ಮಾ ಬಾನು.
ದಾವಣಗೆರೆ ದಕ್ಷಿಣ ವಲಯ : ದಾವಣಗೆರೆ ತಾಲ್ಲೂಕಿನ ಗೋಪನಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪಿ.ಆರ್. ಮಲ್ಲಿಕಾರ್ಜುನಯ್ಯ.
ಚನ್ನಗಿರಿ : ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮದ ಸರ್ಕಾರಿ ಬಾಲಕರ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ನಸೀಮಾ ಬಾನು.
ಹರಿಹರ : ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಕೆ.ಪಿ.ಎಸ್. ಪ್ರಾಥಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಆರ್. ಶಿವಕುಮಾರ್.
ಜಗಳೂರು : ಜಗಳೂರು ತಾಲ್ಲೂಕಿನ ಬಿಳಿಚೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಪಿ.ನಾಗೇಂದ್ರಪ್ಪ.
ಹೊನ್ನಾಳಿ : ಹೊನ್ನಾಳಿ ತಾಲ್ಲೂಕಿನ ಬೀರಗೊಂಡನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಕೆ.ಆರ್. ಶೋಭಾ.
ಪ್ರೌಢಶಾಲಾ ವಿಭಾಗ
ದಾವಣಗೆರೆ ಉತ್ತರ ವಲಯ : ದಾವಣಗೆರೆ ಆಜಾದ್ ನಗರದಲ್ಲಿರುವ ಎಸ್.ಎಸ್.ಪಿ. ಉರ್ದು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಶ್ರೀಮತಿ ನರೇನಾ ಬಾನು.
ದಾವಣಗೆರೆ ದಕ್ಷಿಣ ವಲಯ : ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಶ್ರೀಮತಿ ಬಿ.ಹೆಚ್. ಲೀಲಾವತಿ.
ಚನ್ನಗಿರಿ : ಚನ್ನಗಿರಿ ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎನ್. ಹಾಲೇಶಪ್ಪ.
ಹರಿಹರ : ಹರಿಹರ ತಾಲ್ಲೂಕಿನ ಕಡಾರನಾಯ್ಕ ನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಡಿ.ಎಸ್.ವೆಂಕಟೇಶ್ ರಾವ್.
ಜಗಳೂರು : ಜಗಳೂರು ತಾಲ್ಲೂಕಿನ ಗುರುಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ವಿಶ್ವನಾಥ್ ಜಂಬಗಿ.
ಹೊನ್ನಾಳಿ : ಹೊನ್ನಾಳಿ ತಾಲ್ಲೂಕಿನ ನ್ಯಾಮತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಕೃಷ್ಣಾ ನಾಯ್ಕ.