ಬೆಂಗಳೂರು, ಸೆ.5- ಬೆಂಗಳೂರಿನ ವಿಧಾನ ಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ಗುರುವಾರ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹರಿಹರ ತಾಲ್ಲೂಕಿನ ಹಿಂಡಸಘಟ್ಟ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಿ.ಅರುಣ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಪಿ.ಹರೀಶ್, ಕೋನರೆಡ್ಡಿ, ರಿಜ್ವಾನ್ ಹರ್ಷದ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಡಿ.ಟಿ.ಶ್ರೀನಿವಾಸ್, ಗೋವಿಂದರಾಜ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ವೇಳೆ ಹಾಜರಿದ್ದು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ 20 ಜನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತ್ತು 10 ಪ್ರೌಢ ಶಾಲಾ ಶಿಕ್ಷಕರಿಗೆ ಹಾಗೂ ಒಬ್ಬರು ಪ್ರೌಢ ಶಾಲಾ ವಿಭಾಗದ ವಿಶೇಷ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.