ನಗರದಲ್ಲಿ ನಾಡಿದ್ದು ಉದ್ಯೋಗ ಮೇಳ

ದಾವಣಗೆರೆ, ಸೆ.10 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದಿಂದ ನಾಡಿದ್ದು ದಿನಾಂಕ 13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಕೊಳ್ಳಲಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 8105122556, 08192-259446.

error: Content is protected !!