ದಾವಣಗೆರೆ, ಸೆ.11- ದಾಸಶ್ರೇಷ್ಠ ಶ್ರೀಕನಕದಾಸರು ಹಾಗೂ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಜಿಲ್ಲಾ ಹೋರಾಟ ಸಮಿತಿ ಇವರಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಳೆದ ವಾರ ನಡೆದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ 227 ನೇ ಜಯಂತ್ಯೋತ್ಸವದ ಪ್ರಯುಕ್ತ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಮಿತಿಯ ಅಧ್ಯಕ್ಷ ಪಿ.ಜಿ.ರಮೇಶ್ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೇರವೇರಿಸಿದರು.
ಇದೇ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮತ್ತು ವೃತ್ತವನ್ನು ಅಚ್ಚುಕಟ್ಟಾಗಿ ನಿರ್ಮಿಸಿದ ದೂಡಾ ನಿವೃತ್ತ ಸಹಾಯಕ ನಿರ್ದೇಶಕ ಬಿ. ರೇಣುಕಾ ಪ್ರಸಾದ್ ಮತ್ತು ದೂಡಾ ನಿವೃತ್ತ ಅಭಿಯಂತರ ಕೆ.ಹೆಚ್. ಶ್ರೀಕರ್ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಕೆ. ಪ್ರಸನ್ನ ಕುಮಾರ್, ಮುಖಂಡ ಎಸ್.ಎಲ್. ಅನಂದಪ್ಪ ಮಾತನಾಡಿದರು. ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮತ್ತು ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಸ್ಟರ್ ಶಿವಣ್ಣ, ಟಿ.ಎಸ್. ಉಮೇಶ್, ಕರಿಬಸಪ್ಪ ಕಸವಾಳ, ಸಲ್ಲಳ್ಳಿ ಮಂಜಣ್ಣ, ರಮೇಶ್, ಗುರುನಾಥ, ಚಲುವಪ್ಪ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಡಾಣೆ ಸಿದ್ದಪ್ಪ ನಿರೂಪಿಸಿದರು.