ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಇಂದು ಮಧ್ಯಾಹ್ನ 12 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಕರಾಳ ದಿನ ಆಚರಿಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಸೆ.14ರಂದು `ಹಿಂದಿ ದಿವಸ್’ ಆಚರಣೆ ಮಾಡುತ್ತಾ ಬಂದಿದ್ದು, 2010ರಿಂದ ಕರವೇ ಜಿಲ್ಲಾ ಘಟಕ ಸರ್ಕಾರದ ಎಲ್ಲಾ ಇಲಾಖೆಗಳ ಮುಂಭಾಗ ಪ್ರತಿಭಟನೆ ನಡೆಸಿ ಹಿಂದಿ ಸಪ್ತಾಹ ಮಾಡುವ ಇಲಾಖೆಗಳ ವಿರುದ್ಧ ಹೋರಾಟ ಮಾಡುತ್ತಾ ಬಂದಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯು ಹಿಂದಿ ಭಾಷೆಯನ್ನು ಪ್ರೋತ್ಸಾಹಿ ಸುವುದು ಎಷ್ಟರ ಮಟ್ಟಿಗೆ ಸರಿ ? ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಮಾರ್ಗಸೂಚಿ ಫಲಕಗಳನ್ನು ಹಿಂದಿ ಭಾಷೆಯಲ್ಲಿ ಹಾಕಿರುವು ದನ್ನು ಕರವೇ ತೀವ್ರವಾಗಿ ಖಂಡಿಸುತ್ತದೆ.
ರಾಜ್ಯದಲ್ಲಿ ಹಿಂದಿ ಭಾಷೆ ರಾರಾಜಿಸುವುದನ್ನು ಕರವೇ ಸಹಿಸುವುದಿಲ್ಲ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು. ಯಾವುದೇ ಬ್ಯಾಂಕುಗಳು, ಶಾಲಾ-ಕಾಲೇಜುಗಳು, ರೈಲ್ವೆ ಇಲಾಖೆ ಹಾಗೂ ಅಂಚೆ ಕಚೇರಿಗಳಲ್ಲಿ `ಹಿಂದಿ ಸಪ್ತಾಹ’ ಅಥವಾ `ಹಿಂದಿ ದಿವಸ್’ ಹೆಸರಲ್ಲಿ ಕಾರ್ಯಕ್ರಮ ನಡೆಸಿದರೆ ಆ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.