80 ಕಿ.ಮೀ. ಮಾನವ ಸರಪಳಿ 85 ಸಾವಿರ ಜನ ಭಾಗಿ

80 ಕಿ.ಮೀ. ಮಾನವ ಸರಪಳಿ 85 ಸಾವಿರ ಜನ ಭಾಗಿ

ದಾವಣಗೆರೆ, ಸೆ. 15 – ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಗಡಿ ಗ್ರಾಮ ನ್ಯಾಮತಿ ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಹರಿಹರ ತಾಲ್ಲೂಕಿನ ಹಾವೇರಿ ಜಿಲ್ಲೆಯ ಗಡಿ ಗ್ರಾಮದವರೆಗೆ ಬೃಹತ್ ಮಾನವ ಸರಪಳಿ ಆಯೋಜಿಸಲಾಗಿತ್ತು.

80 ಕಿ.ಮೀ ಅಂತರದಲ್ಲಿ 85 ಸಾವಿರಕ್ಕಿಂತ ಹೆಚ್ಚಿನ ಜನರು ಭಾಗಿಯಾಗಿ ಮಾನವ ಸರಪಳಿ ನಿರ್ಮಿಸಿದ್ದರು.

80 ಕಿ.ಮೀ. ಮಾನವ ಸರಪಳಿ 85 ಸಾವಿರ ಜನ ಭಾಗಿ - Janathavani

ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸಮವಸ್ತ್ರ ಹಾಗೂ ವಿವಿಧ ವೇಷಭೂಷಣಗಳಲ್ಲಿ ಭಾಗಿಯಾಗಿದ್ದರು. ಸ್ವಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಕಲಾವಿದರು, ಸಂಘ, ಸಂಸ್ಥೆಯವರು, ಸರ್ಕಾರಿ ನೌಕರರು, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು ಸೇರಿದಂತೆ ಸಹಸ್ರಾರು ಮಂದಿ ರಸ್ತೆಯುದ್ದಕ್ಕೂ ಎಡಬದಿಯಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿದರು.

ಮಾನವ ಸರಪಳಿ ಕಾರ್ಯಕ್ರಮದ ನಂತರ ಸಂವಿಧಾನ ಪೀಠಿಕೆ ವಾಚನ ಮಾಡಿದರು. ಹರಿಹರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿದ್ದಗಂಗಾ ಶಾಲೆ ವಿದ್ಯಾರ್ಥಿಗಳು ವಿನೂತನವಾಗಿ ಭಾರತ ಭೂಪಟ ರಚನೆ ಮಾಡಿದರು.

error: Content is protected !!