ದಾವಣಗೆರೆ, ಸೆ. 16- ಛಲವಾದಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬೆಂಗಳೂರು ಆರ್.ಆರ್. ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾ ಆಗ್ರಹಿಸಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಮಹಾಸಭಾದ ಅಧ್ಯಕ್ಷ ಎನ್. ರುದ್ರಮುನಿ, ಶಾಸಕರು ಜಾತಿ ನಿಂದನೆ ಮಾಡಿ ಸಮುದಾಯಕ್ಕೆ ಕೀಳು ಮಾತಿನಲ್ಲಿ ಅವಹೇಳನಕಾ ರಿಯಾಗಿ ಮಾತನಾಡಿರುವುದು ಖಂಡನೀಯ ಎಂದರು.
ಶಾಸಕರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿ ಬಂಧಿಸಿರುವುದು ಸ್ವಾಗತಾರ್ಹ. ಆದರೆ ಶಾಸಕ ಸ್ಥಾನವನ್ನೂ ವಜಾಗೊಳಿಸಿ, ಗಡಿಪಾರು ಮಾಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಶಾಸಕ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.
ಮುಖಂಡ ನಾಗಭೂಷಣ್ ಮಾತನಾಡಿ, ಯಾದಗಿರಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಯುವರಿಗೆ ಶಿಕ್ಷೆಯಾಗಬೇಕು. ಅಲ್ಲಿ ದಲಿತರಿಗೆ ಬಹಿಷ್ಕಾರ ಮಾಡಿರುವುದು ಖಂಡನೀಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ರಾದ ಎಸ್.ಶೇಖರಪ್ಪ, ಜಯಪ್ರಕಾಶ್, ರಾಮಯ್ಯ, ಹದಡಿ ಚಂದ್ರಪ್ಪ, ನವೀನ್ ಕುಮಾರ್ ಇದ್ದರು.