ವಿಶ್ವಕರ್ಮ ಸಮಾಜದ ವತಿಯಿಂದ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಮಹೋತ್ಸವ ಇಂದು ನಡೆಯಲಿದೆ.ಬೆಳಿಗ್ಗೆ 5.30ಕ್ಕೆ ವಿಶ್ವಕರ್ಮ ಹೋಮ ನಡೆಯಲಿದ್ದು, ಬೆಳಿಗ್ಗೆ 10ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹಾಗೂ ಜಿ.ಪಂ. ಸಿಇಓ ಸುರೇಶ್ ಬಿ. ಇಟ್ನಾಳ್ ಭಾಗವಹಿಸಲಿ ದ್ದಾರೆ. ಮಧ್ಯಾಹ್ನ 12ಕ್ಕೆ ಕುಂಭೋತ್ಸವ, ಸ್ತಬ್ಧ ಚಿತ್ರ ಹಾಗೂ ಕಲಾ ತಂಡಗಳೊಂ ದಿಗೆ ಭಗವಾನ್ ವಿಶ್ವಕರ್ಮ ಮೂರ್ತಿ ಯ ಮೆರವಣಿಗೆ ನಡೆಯಲಿದೆ.