ಕೆಟಿಜೆ ನಗರದ 3ನೇ ಮೇನ್, 17ನೇ ಕ್ರಾಸ್‌ನಲ್ಲಿ ಶ್ರೀ ಓಂಕಾರ ಯುವಕರ ಸಂಘದಿಂದ ಏರ್ಪಡಿಸಿ ರುವ ಗಣೇಶ ಮಹೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ 12.30 ರಿಂದ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ.
18ರ ಬುಧವಾರ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 90% ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯಮಟ್ಟ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
19ರ ಗುರುವಾರ ಸಂಜೆ 4 ಗಂಟೆಗೆ ಬೃಹತ್ ಶೋಭಾಯಾತ್ರೆ ಯ ಮೂಲಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.