ನಗರದಲ್ಲಿ ಇಂದು ವಿಕಸನ ಶಿಬಿರ

ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು ಹಾಗು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆದೇಶದಂತೆ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ವಾರದ ಕಾಲ ವಿಕಸನ ಶಿಬಿರವನ್ನು ನಡೆಸಲಾಗುತ್ತಿದೆ.

ಇಂದು ಬೆಳಿಗ್ಗೆ 10. 30 ಗಂಟೆಗೆ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಎಸ್‌ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ  ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಸಂವೇದ ಎಜುಕೇಶನ್ ಮತ್ತು ರಿಚಾ ಸಂಸ್ಥೆಯ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞರಾದ ಡಾ. ಸುರೇಂದ್ರನಾಥ ಪಿ. ನಿಶಾನಿಮಠ, ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್. ಬಿ ಅರವಿಂದ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ನಿರ್ದೇಶಕ ಪ್ರೊ. ವೈ. ವೃಷಬೇಂದ್ರಪ್ಪ ವಹಿಸಲಿದ್ದಾರೆ.

error: Content is protected !!