ನಗರದಲ್ಲಿ ಇಂದು ರಾಜ್ಯ ಆಹ್ವಾನಿತ ಬಾಸ್ಕೆಟ್‌ಬಾಲ್ ಟೂರ್ನಿ

ದಾವಣಗೆರೆ, ಸೆ.20- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ 57ನೇ ಜನ್ಮ ದಿನದ ಅಂಗವಾಗಿ ನಾಳೆ ದಿನಾಂಕ 21 ರ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ 3-3 ರಾಜ್ಯ ಮಟ್ಟದ ಆಹ್ವಾನಿತ ಬಾಸ್ಕೆಟ್‌ಬಾಲ್ ಟೂರ್ನಿ ಏರ್ಪಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಾಲಿಕೆ ಸದಸ್ಯರೂ ಆಗಿರುವ ದಾವಣಗೆರೆ ಬಾಸ್ಕೆಟ್ ಬಾಲ್ ಕ್ಲಬ್ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಆಹ್ವಾನಿತ ತಂಡಗಳ ಜೊತೆಗೆ 16 ವರ್ಷ ವಯೋಮಿತಿಯ ಬಾಲಕರಿಗಾಗಿ 3-3 ರಾಜ್ಯ ಮಟ್ಟದ ಟೂರ್ನಿ ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೆಳಿಗ್ಗೆ 10.30ಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.

ವಿಜೇತರಿಗೆ ಪ್ರಥಮ ಬಹುಮಾನ 15 ಸಾವಿರ ರೂ., ದ್ವಿತೀಯ 10  ಸಾವಿರ ಹಾಗೂ  ತೃತೀಯ ಬಹುಮಾನ 5 ಸಾವಿರ ರೂಪಾಯಿ ನಗದು, ಟ್ರೋಫಿ ನೀಡಲಾಗುವುದು. 16 ವರ್ಷ ವಯೋಮಿತಿ ಬಾಲಕರ ವಿಭಾಗದ ತಂಡಕ್ಕೂ ಪ್ರಶಸ್ತಿ ನೀಡಲಾಗುವುದು ಎಂದು ಬಾಸ್ಕೆಟ್ ಬಾಲ್ ಕ್ಲಬ್ ಕಾರ್ಯದರ್ಶಿ ಆರ್. ವೀರೇಶ್ ಹೇಳಿದರು.

3-3 ಮಾದರಿ ಈಗಾಗಲೇ ಸಾಕಷ್ಟು ಪ್ರಚಲಿತದಲ್ಲಿದ್ದು ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ 24 ತಂಡಗಳು ಭಾಗವಹಿಸಲಿವೆ ಎಂದರು.

ದಾವಣಗೆರೆ ಬಾಸ್ಕೆಟ್ ಬಾಲ್ ಕ್ಲಬ್ ಗೌರವಾಧ್ಯಕ್ಷ ಪಿ. ರಾಮಮೂರ್ತಿ, ಇ.ಆರ್. ವಸಂತ್‌ಕುಮಾರ್, ದರ್ಶನ್, ಸಚಿನ್ ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!