ಶ್ರೀ ವಿನಾಯಕ ಎಜ್ಯುಕೇಶನ್ ಟ್ರಸ್ಟ್ ನ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಮತ್ತು ಪ್ರಸಾರಾಂಗ ಹಾಗೂ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಶಿಕ್ಷಣ ನೀತಿಯ ಪದವಿ ಕನ್ನಡ ಭಾಷಾ ಪಠ್ಯ ಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಗಾರವನ್ನು ಇಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಬಿ.ಎಸ್. ಚನ್ನಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಾಚಾರ್ಯ ಪ್ರೊ. ಎಂ.ಸಿ. ಗುರು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಿ.ಡಿ. ಕುಂಬಾರ ಪಠ್ಯ ಪುಸ್ತಕಗಳ ಲೋಕಾರ್ಪಣೆ ಮಾಡುವರು. ಸಾಹಿತಿ ಡಾ. ಲೋಕೇಶ ಅಗಸನಕಟ್ಟೆ ಪಠ್ಯವಲೋಕನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಶಿವಕುಮಾರ ಕಣಸೋಗಿ, ಡಾ. ಜೋಗಿನಕಟ್ಟೆ ಮಂಜುನಾಥ, ಡಾ. ಎಸ್.ಆರ್. ಅಂಜನಪ್ಪ, ಕೆ.ಎಸ್. ಮುರಳಿ, ಡಾ. ಷಣ್ಮುಖ ಪಾಲ್ಗೊಳ್ಳಲಿದ್ದಾರೆ.