ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ದಾವಣಗೆರೆ, ಸೆ.24- ಮುಡಾ  ಹಗರಣ ಪ್ರಕರಣಕ್ಕೆ   ಸಂಬಂಧಿಸಿದಂತೆ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಜಮಾಯಿಸಿ, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಲೋಕಾ ಯುಕ್ತ ತನಿಖೆ ವೇಳೆ ಆರೋಪ ಕೇಳಿಬಂದ ತಕ್ಷಣವೇ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗೆಯೇ ಪ್ರಾಸಿಕ್ಯೂಷನ್ ಎದುರಿಸಬೇಕಿರುವ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕು. ಇಲ್ಲವಾದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಕುಟುಂಬಸ್ಥರು ಹೊಂದಿದ್ದ ಮುಡಾ ನಿವೇಶನಗಳ ಕುರಿತಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು ಬಿಜೆಪಿ ಅಲ್ಲ. ಈ ವಿಚಾರದಲ್ಲಿ ಬಿಜೆಪಿ ಹಾಗೂ ರಾಜ್ಯಪಾಲರನ್ನು ಟೀಕಿಸುವುದು ಸರಿಯಲ್ಲ. ಇಡಿ, ಸಿಬಿಐ  ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಕಾಂಗ್ರೆಸ್. ಹೀಗಾಗಿ ನಮ್ಮ ವಿರುದ್ಧ ಟೀಕಿಸುವ ನೈತಿಕತೆ ಅವರಿಗಿಲ್ಲ ಎಂದು ಹೇಳಿದರು.

ರೈತ-ದಲಿತ ವಿರೋಧಿ ಹಾಗೂ ಹಿಂದೂ ವಿರೋಧಿಯೂ ಆಗಿರುವ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್‌ಗಾಗಿ ಹಿಂದುಗಳನ್ನು ಟಾರ್ಗೆಟ್ ಮಾಡುತ್ತಿದೆ. ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಹಿಂದುಗಳನ್ನು ಬಂಧಿಸಿ, ಪೊಲೀಸರ ಮೂಲಕ ಹಿಂಸೆ ನೀಡಲಾಗುತ್ತಿದೆ. ಸರ್ಕಾರ ಕೂಡಲೇ ಅಮಾಯಕ ಹಿಂದೂಗಳನ್ನು ಬಂಧಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಮುಖಂಡ ಮಾಡಾಳು ಮಲ್ಲಿಕಾರ್ಜುನ್‌ ಮಾತನಾಡಿ, ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ಒಪ್ಪಿದ ಬಳಿಕವೂ ಸಿಎಂ ಸಿದ್ದರಾಮಯ್ಯ ಅವರು ಭಂಡತನ ಪ್ರದರ್ಶಿಸುವುದು ಸರಿಯಲ್ಲ. ಒಂದು ವರ್ಗದ ತುಷ್ಟೀಕರಣ ಹಾಗೂ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು. ಆರೋಪ ಮುಕ್ತರಾದ ಬಳಿಕ ಮತ್ತೆ ಸ್ಥಾನದಲ್ಲಿ ಮುಂದುವರೆಯಲಿ. ಹಪ್ಪಳ ತಿಂದವರು ಕದ ತಿನ್ನುವವರಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಮಾತನಾಡಿ, ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯ ಮರೆತು ಹಗರಣಗಳಲ್ಲೇ ಕಾಲಹ ರಣ ಮಾಡಿದೆ. ಸಿಎಂ ತಪ್ಪೆಸಗಿಲ ಎನ್ನುವು ದಾದದಲ್ಲಿ ಮುಡಾ ನಿವೇಶನ ಕುರಿತು ಕಲಾ ಪದ ಚರ್ಚೆಯಿಂದ ಪಲಾಯನ ಮಾಡಿ ದ್ದೇಕೆ? ಎಂದು ಪ್ರಶ್ನಿಸಿದರು. ನ್ಯಾಯಾಲಯಕ್ಕೆ ಸಿದ್ದರಾಮಯ್ಯ ಅವರು ಗೌರವ ನೀಡುವು ದಾದಲ್ಲಿ ಸಿಎಂ ಸ್ಥಾನದಲ್ಲಿ ಮುಂದುವರಿ ಯುವುದು ಸರಿಯಲ್ಲ ಎಂದರು.

ಪ್ರತಿಭಟನೆಯಲ್ಲಿ ಮುಖಂಡರಾದ ಬಿ.ಜಿ. ಅಜಯಕುಮಾರ್, ಲೋಕಿಕೆರೆ ನಾಗರಾಜ್, ಎಸ್.ಟಿ.ವೀರೇಶ್, ಕೆ. ಪ್ರಸನ್ನಕುಮಾರ್, ಆರ್.ಶಿವಾನಂದ್, ಪಿ.ಸಿ.ಶ್ರೀನಿವಾಸ್, ಕೆ.ಎಂ. ವೀರೇಶ್, ಸತೀಶ್ ಕೊಳೇನಹಳ್ಳಿ, ಅನಿಲ್‌ನಾಯ್ಕ, ಟಿಂಕರ್ ಮಂಜಣ್ಣ, ಎಚ್.ಪಿ. ವಿಶ್ವಾಸ್, ಕಲ್ಲೇಶ್,  ಭಾಗ್ಯ ಪಿಸಾಳೆ, ಗಾಯತ್ರಿ ಖಂಡೋಜಿರಾವ್, ಗೌರಮ್ಮ ಪಾಟೀಲ್ ಇತರರಿದ್ದರು.

error: Content is protected !!