ವೀರಶೈವ ಮಹಾಸಭಾ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಗೆ ಜ್ಯೋತಿ ರಾಧೇಶ್‌ ಜಂಬಗಿ ಆಯ್ಕೆ

ವೀರಶೈವ ಮಹಾಸಭಾ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಗೆ  ಜ್ಯೋತಿ ರಾಧೇಶ್‌ ಜಂಬಗಿ ಆಯ್ಕೆ

ದಾವಣಗೆರೆ, ಸೆ. 24- ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಗೆ ಶ್ರೀಮತಿ ಜ್ಯೋತಿ ರಾಧೇಶ್ ಜಂಬಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವೀರಶೈವ ಮಹಾಸಭಾದ  ಚುನಾವಣಾಧಿಕಾರಿ ಸಿ.ಎಂ. ವೀರೇಶ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಸಮಾರಂಭದಲ್ಲಿ ಜ್ಯೋತಿ ರಾಧೇಶ್ ಜಂಬಗಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. 

ಮಹಾಸಭಾ ರಾಷ್ಟ್ರ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಈಶ್ವರ ಖಂಡ್ರೆ, ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಬಿದರಿ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

error: Content is protected !!