ಕೆಟ್ಟ ಚಟಗಳಿಂದ ದೂರವಿರಿ, ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ : ಡಾ. ಕಡ್ಲಿ

ಕೆಟ್ಟ ಚಟಗಳಿಂದ ದೂರವಿರಿ, ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ : ಡಾ. ಕಡ್ಲಿ

ದಾವಣಗೆರೆ, ಸೆ. 26 – ನಗರದ ಜೈನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಕ್ಕಳ ತಜ್ಞ ಡಾ. ಎನ್.ಕೆ. ಕಡ್ಲಿ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೆಟ್ಟ ಚಟಗಳಿಂದ ದೂರವಿದ್ದರೆ ಮಾತ್ರ ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಚೆನ್ನಾಗಿರುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್, ಕಾಲೇಜಿನ ಸಲಹೆಗಾರ ಡಾ. ಮಂಜಪ್ಪ ಸಾರಥಿ, ಡಾ. ಜಿ. ನಟರಾಜ, ಇತರರು ಭಾಗವಹಿಸಿದ್ದರು.

error: Content is protected !!