ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ, ಸೆ. 26 –  ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ ಗಳಿಗೆ ವಿವಿಧ ಸಾಲ ಸೌಲಭ್ಯ ಯೋಜನೆಗಳಡಿ ಸಹಾಯಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ
ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 30 ರವರೆಗೆ  ವಿಸ್ತರಿಸಲಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ. ತಿಳಿಸಿದ್ದಾರೆ.

error: Content is protected !!