ರಾಣೇಬೆನ್ನೂರು, ಸೆ. 27 – ಡಿಸೆಂಬರ್ ತಿಂಗಳಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪೂರಕವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಕನ್ನಡ ಜ್ಯೋತಿ ರಥ ಯಾತ್ರೆ ಇಂದು ಸಂಜೆ ರಾಣೇಬೆನ್ನೂರಿಗೆ ಆಗಮಿಸಿದ್ದು ಸಡಗರ- ಸಂಭ್ರಮದೊಂದಿಗೆ ಬರಮಾಡಿಕೊಳ್ಳಲಾಯಿತು.
ಕನ್ನಡ ಪರ ಸಂಘಟನೆಗಳ ಜೊತೆಗೆ ಕಸಾಪದ ಎಲ್ಲಾ ಪದಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರು, ನಗರಸಭೆ ಸದಸ್ಯರು, ವರ್ತಕರು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರೂ ಮೆರವಣಿಗೆ ತಹಶೀಲ್ದಾರ್ ಕಛೇರಿಯಿಂದ ಪ್ರವಾಸಿ ಮಂದಿರಕ್ಕೆ ತೆರಳಿತು. ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದವು.