ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ

ದಾವಣಗೆರೆ, ಸೆ.30- ವಿಶ್ವ ವಿಕಲ ಚೇತನರ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲ ಚೇತನರ ಕ್ಷೇತ್ರದಲ್ಲಿ ಸಾಧನೆ ಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿರುವ, ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿ ಕಾರಿಗಳ ಕಚೇರಿಯಲ್ಲಿ ಅರ್ಜಿ ಲಭ್ಯವಿದ್ದು, ಅ.15 ಅರ್ಜಿ ಸಲ್ಲಿ ಸಲು ಕೊನೆ ದಿನವಾಗಿದೆ. 

ಮಾಹಿತಿ ಗಾಗಿ 08192-263936, 263939 ಸಂಪರ್ಕಿಸಿ.

error: Content is protected !!