ದಾವಣಗೆರೆ, ಸೆ. 29 – ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸು ತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾ ಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿ ಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 10 ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
December 22, 2024