ಜಿಲ್ಲಾ ಅತ್ತ್ಯುತ್ತಮ ಸೇವಾ ಶಿಕ್ಷಕಿ ಪ್ರಶಸ್ತಿ ಪ್ರದಾನ

ಜಿಲ್ಲಾ ಅತ್ತ್ಯುತ್ತಮ ಸೇವಾ ಶಿಕ್ಷಕಿ ಪ್ರಶಸ್ತಿ ಪ್ರದಾನ

ಹರಿಹರ, ಸೆ. 29 – ಗುತ್ತೂರು ಕಾಲೋನಿಯ ಶ್ರೀ ರಾಮಕೃಷ್ಣ ಇಂಟರ್ ನ್ಯಾಷನಲ್ ಶಾಲೆಯ ಸಹ ಶಿಕ್ಷಕಿ ಕು. ಆರ್‌. ಶಶಿಕಲಾ ಅವರಿಗೆ ಜಿಲ್ಲಾ ಅತ್ಯುತ್ತಮ ಸೇವಾ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಸೇವಾ ಪ್ರಶಸ್ತಿ ಹಾಗೂ ಎಸ್.ಎಸ್.ಎಲ್‌.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶಶಿಕಲಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ್, ನಿರ್ದೇಶಕರುಗಳಾದ ಶ್ರೀಮತಿ ಸಹನ ವಿಜಯಕುಮಾರ್, ಶ್ರೀಮತಿ ಸ್ನೇಹ ಕಿರಣ್ ಕುಮಾರ್ , ಮುಖ್ಯ ಶಿಕ್ಷಕರಾದ ಉದಯಕುಮಾರ್ ಹಾಗೂ  ಇತರರು ಪಾಲ್ಗೊಂಡಿದ್ದರು. 

error: Content is protected !!