ದಾವಣಗೆರೆ, ಸೆ. 29 – ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
December 30, 2024