ದಾವಣಗೆರೆ, ಸೆ. 30 – ನಗರದ ಡಿ. ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 2ರ ಬುಧವಾರ ಮಹಾನವಮಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಅಂದು ಬೆಳಿಗ್ಗೆ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ, ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯುವುದು ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.
ಶ್ರೀಮತಿ ರಾಜಮ್ಮ ಮತ್ತು ಜೆ.ಎ. ಬಸವರಾಜು, ಶ್ರೀಮತಿ ಸರೋಜಮ್ಮ ಜೆ.ಎ. ರವಿಕುಮಾರ್ ಗಾಂಧಿ, ಜೆ.ಎ. ಕರಿಸಿದ್ದಪ್ಪ ಹಾಗೂ ಕುಟುಂಬದವರು (ಮಾಲೀಕರು ರಾಜಭವನ ಹೋಟೆಲ್, ದಾವಣಗೆರೆ) ಇವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.