ನಗರದಲ್ಲಿ ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಆಯೋಜಿಸಲಾಗಿದೆ. 

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷತೆ ವಹಿಸುವರು.

ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್‍ಕುಮಾರ್ ಹಿರಿಯ ನಾಗರಿಕರಿಗೆ ಕಾನೂನಿನಲ್ಲಿರುವ ಅವಕಾಶಗಳ ಕುರಿತು ಮಾಹಿತಿ ನೀಡುವರು. 

error: Content is protected !!