ಮಲೇಬೆನ್ನೂರು ಪಟ್ಟಣದ ಮುಖ್ಯ ವೃತ್ತದಲ್ಲಿರುವ ಶ್ರೀ ಚೌಡೇಶ್ವರಿ ದೇವಿ ಮತ್ತು ಶ್ರೀ ಗಂಗಮ್ಮದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ (ದಸರಾ) ಹಬ್ಬದ ಅಂಗವಾಗಿ ಇಂದಿನಿಂದ ಇದೇ ದಿನಾಂಕ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ 9 ಗಂಟೆಯವರೆಗೆ ದೇವಿ ಮಹಾತ್ಮೆ ಪುರಾಣ ಪ್ರವಚನ ಹಾಗೂ ಶ್ರೀ ಚೌಡೇಶ್ವರಿ ದೇವಿ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಸದಸ್ಯ ಗೌಡ್ರು ಮಂಜಣ್ಣ, ಅರ್ಚಕ ಪೂಜಾರ್ ಚಿಕ್ಕಪ್ಪ ತಿಳಿಸಿದ್ದಾರೆ.
ಪುರಾಣ ಪ್ರವಚನ, ಭಜನೆ ನಂತರ ಪ್ರತಿ ದಿನ ರಾತ್ರಿ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಘಟ ಸ್ಥಾಪನೆ ನೆರವೇರಲಿದೆ.
ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲೂ ಇಂದಿನಿಂದ ನವರಾತ್ರಿ ಉತ್ಸವ ನಡೆಯಲಿದ್ದು, ಭದ್ರಕಾಳಮ್ಮನಿಗೆ ಪ್ರತಿನಿತ್ಯ ದೇವಿ ಅಲಂಕಾರ, ಪೂಜೆ ಮಾಡ ಲಾಗುವುದೆಂದು ದೇವಸ್ಥಾನ ಕಮಿಟಿಯ ಬಿ. ಚಿದಾನಂದಪ್ಪ ತಿಳಿಸಿದ್ದಾರೆ. ಕೊಕ್ಕನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮತ್ತು ಜಿಗಳಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ದೀಪ ಹಾಕಲಾಗುವುದು.