ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರೋಗ್ಯ ತಪಾಸಣೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರೋಗ್ಯ ತಪಾಸಣೆ

ಹರಪನಹಳ್ಳಿ, ಅ.6- ತಾಲ್ಲೂಕಿನ ವ್ಯಾಸನ ತಾಂಡಾ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭಾನುವಾರ ಮಹಿಳೆಯರಿಗೆ ಉಚಿತ ಥೈರಾಯ್ಡ್ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.

ಈ ವೇಳೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀಲಗುಂದ ವಲಯ ಮೇಲ್ವಿಚಾರಕಿ ನೇತ್ರಾಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಸಂಘವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡುವುದರ ಜೊತೆಗೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ದಾವಣಗೆರೆ ಶಿವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯ ಜಯಂತ್ ಬಿಸಲೇರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಬಡವರ ಅನುಕೂಲಕ್ಕಾಗಿ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಹಾಕಿಕೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿ ಕಾರಿ ಕವಿತಾ, ಎಸ್‍ಡಿಎಂಸಿ ಅಧ್ಯಕ್ಷ ಎಲ್.ಸೋಮಶೇಖರ್‌, ಗ್ರಾ.ಪಂ ಮಾಜಿ ಸದಸ್ಯ ಎಲ್.ಸಂತೋಷಕುಮಾರ್‌, ವೈದ್ಯ ಕೆ.ಪಿ.ನಿತಿನ್, ಎಸ್. ನಿಶ್ಚಲ ಸೇವಾ ಪ್ರತಿನಿಧಿ ಶ್ರೀದೇವಿ, ಧರ್ಮಸ್ಥಳ ಮಂಜುನಾಥ ಸಂಘದ ಸದಸ್ಯರು ಇದ್ದರು.

error: Content is protected !!