ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಕೆ. ಚಮನ್ ಸಾಬ್
ದಾವಣಗೆರೆ, ಅ.17- ನಗರದ ಎಂಸಿಸಿ `ಬಿ’ ಬ್ಲಾಕ್‌ನ ವಿವಿಧ ಪ್ರದೇಶ ಗಳಿಗೆ ಪಾಲಿಕೆ ಮೇಯರ್ ಕೆ. ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಆಯುಕ್ತರಾದ ಶ್ರೀಮತಿ ರೇಣುಕಾ ಅವರು ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ವಾರ್ಡಿನ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮೇಯರ್ ಚಮನ್ ಸಾಬ್ ಅವರು, ಪಾಲಿಕೆಯ ಅಧಿಕಾರಿಗಳೊಂದಿಗೆ ಎಲ್ಲಾ ವಾರ್ಡ್‌ಗಳಿಗೆ ಭೇಟಿ ನೀಡುತ್ತಿದ್ದೇವೆ. ವಾರ್ಡ್ ಗಳಲ್ಲಿನ ಸಮಸ್ಯೆಗಳನ್ನು ತಿಳಿಯುವ ಕೆಲಸ ಮಾಡಲಾಗುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ವಾರ್ಡ್ ಗಳಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಎಂಸಿಸಿ `ಬಿ’ ಬ್ಲಾಕ್ ವಾರ್ಡ್‌ನ ಪ್ರದೇಶಗಳಿಗೆ ಭೇಟಿ ನೀಡಿದ್ದು, ಇಲ್ಲಿನ ಸ್ವಚ್ಛತೆ ಮೆಚ್ಚುವಂಥದ್ದು. ಇದೊಂದು ಮಾದರಿ ವಾರ್ಡ್ ಎಂದರೂ ತಪ್ಪಾಗಲಾರದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ವಾರ್ಡ್ ಜನರ ಕುಂದುಕೊರತೆ ಆಲಿಸುವ ಜೊತೆಗೆ ಸ್ವಚ್ಥತೆ, ಕಸ ನಿರ್ವಹಣೆ, ರಸ್ತೆಗಳಲ್ಲಿ ಗುಂಡಿ ಬೀಳದಂತೆ ಎಚ್ಚರ ವಹಿಸುವುದೂ ಸೇರಿದಂತೆ ಹೆಚ್ಚಿನ ಅನುದಾನ ತಂದು ಉತ್ತಮ ಕಾರ್ಯ ಮಾಡುತ್ತಿರುವ ಪಾಲಿಕೆ ಸದಸ್ಯರೂ ಆದ ಆಡಳಿತ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಅವರ ಕಾರ್ಯವೈಖರಿ ಪ್ರಶಂಸನೀಯ. ಜನರೊಂ ದಿಗಿನ ಒಡನಾಟ, ಅಭಿವೃದ್ಧಿ ಕಾರ್ಯಗಳು, ಶುಚಿತ್ವಕ್ಕೆ ಆದ್ಯತೆ ನೀಡಲಾಗಿದೆ. ನಾವು ನೋಡಿದಾಗಲೇ ಇದು ಗೊತ್ತಾಗುತ್ತದೆ. ಮಾದರಿ ವಾರ್ಡ್ ಮಾತ್ರವಲ್ಲ, ಮಾದರಿ ಕಾರ್ಪೊರೇಟರ್ ಎಂಬ ಪ್ರಶಸ್ತಿ ನೀಡಬಹುದು. ಅಷ್ಟು ಶುದ್ಧವಾಗಿ ವಾರ್ಡ್ ಇದೆ ಎಂದು ಸಂತಸ ವ್ಯಕ್ತಪಡಿಸಿದರು.
ಆಯುಕ್ತರಾದ ರೇಣುಕಾ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿನ ಕೆಲ ವಾರ್ಡುಗಳಲ್ಲಿ ಶುಚಿತ್ವದ ಸಮಸ್ಯೆ ಇದೆ. ಕಸ ವಿಲೇವಾರಿಯ ತೊಂದರೆಯೂ ಇದೆ. ಆದರೆ, ಎಂಸಿಸಿ `ಬಿ’ ಬ್ಲಾಕ್ ನಲ್ಲಿ ಈ ರೀತಿಯ ಸಮಸ್ಯೆಗಳು ಇಲ್ಲ. ಕಸ ನಿರ್ವಹಣೆ ತುಂಬಾ ಚೆನ್ನಾಗಿ ಆಗುತ್ತಿದೆ. ಇದು ಹೀಗೆ ಮುಂದುವರಿಯಲಿ. ಮತ್ತಷ್ಟು ಒಳ್ಳೆಯ ಕೆಲಸ ಆಗಲಿ ಎಂದು ಹಾರೈಸಿದರು.
ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ವಾರ್ಡ್ ನಲ್ಲಿನ ಸ್ವಚ್ಛತೆಗೆ ಜನರು ನೀಡಿದ ಸಹಕಾರವೇ ಕಾರಣ. ಕಸ ವಿಲೇ ವಾರಿಯ ಯಾವುದೇ ಸಮಸ್ಯೆ ಇಲ್ಲ. ನಾಗರಿಕರು ನೀಡಿದ ಸೂಚನೆಯನ್ನು ಪಾಲಿಸುತ್ತಿದ್ದಾರೆ. ಇದರಿಂದಾಗಿಯೇ ವಾರ್ಡ್ ಇಷ್ಟೊಂದು ಶುಚಿತ್ವದಿಂದ ಇರಲು ಸಾಧ್ಯವಾಗಿದೆ. ಏನೇ ಸಮಸ್ಯೆ ಇದ್ದರೂ ಕೂಡಲೇ ಸ್ಪಂದಿಸುವ ಕಾರ್ಯ ಮಾಡಲಾಗುತ್ತಿದೆ. ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾ ರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಾರ್ಡ್ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಅನುದಾನ ನೀಡಲಿದ್ದಾರೆ. ಒಟ್ಟಾರೆ ವಾರ್ಡ್ ನ ಮತ್ತಷ್ಟು ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸೂಪರಿಂಟೆಂ ಡೆಂಟ್ ಎಂಜಿನಿಯರ್, ಎಕ್ಸಿಕ್ಯೂಟೀವ್ ಇಂಜಿನಿ ಯರ್, ಎಇ, ಎಇಇ, ವಾಟರ್ ವಿಭಾಗದ ಸಿಬ್ಬಂದಿ, ಅಧಿಕಾರಿಗಳು ಮತ್ತಿತರರು ಹಾಜರಿದ್ದರು.