ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ವಾಲ್ಮೀಕಿ ಸಹ ಒಬ್ಬರು

ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ವಾಲ್ಮೀಕಿ ಸಹ ಒಬ್ಬರು

ಹರಪನಹಳ್ಳಿಯಲ್ಲಿ ಜರುಗಿದ ಜಯಂತ್ಯೋತ್ಸವದಲ್ಲಿ ತಹಶೀಲ್ದಾರ್ ಗಿರೀಶ್‌ಬಾಬು

ಹರಪನಹಳ್ಳಿ,ಅ.17- ಮಹರ್ಷಿ ವಾಲ್ಮೀಕಿ ಅವರು  ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ದ್ದಾರೆ  ಎಂದು ತಹಶೀಲ್ದಾರ್‌ ಗಿರೀಶ್‌ಬಾಬು ಹೇಳಿದರು.

ಪಟ್ಟಣದ ನಟರಾಜ ಕಲಾಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,  ತಾಲ್ಲೂಕು ಪಂಚಾಯಿತಿ ಹಾಗೂ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ  ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು

ರಾಮಾಯಣ ಮಹಾಕಾವ್ಯವನ್ನು ಬರೆದಿದ್ದ ಕ್ಕಾಗಿ ವಾಲ್ಮೀಕಿ ಅವರು ಅತ್ಯಂತ ಪ್ರಸಿದ್ಧರಾಗಿದ್ದಾರೆ. ಇದು ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24,000 ಶ್ಲೋಕಗಳನ್ನು ಒಳ ಗೊಂಡಿದೆ. ರಾಮಾಯಣವು ಸುಮಾರು 480, 002 ಪದಗಳಿಂದ ಕೂಡಿದೆ. ಇದು ಮಹಾಭಾರತದ ಪೂರ್ಣ ಪಠ್ಯದ ಕಾಲು ಭಾಗವಾಗಿದೆ ಎಂದರು.

ಪಿ.ಡಿ.ಓ ಮಾರುತಿ ವಿಶೇಷ ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿ ಸಂಸ್ಕೃತದ ಮಹಾನ್ ಪ್ರತಿಪಾದಕರಾಗಿದ್ದರು ಮತ್ತು ಮಹಾಕಾವ್ಯ ರಾಮಾಯಣವನ್ನು ಬರೆದಿದ್ದಾರೆ. ಇದು ಹಿಂದೂ ಧರ್ಮದ ಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾಗಿದೆ. ರಾಮನ ಸಂಪೂರ್ಣ ಜೀವನವನ್ನು ಬಿತ್ತರಿಸಿದೆ.ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.  ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ವೈ.ಡಿ.ಅಣ್ಣಪ್ಪ ಮಾತನಾಡಿ, ರಾಮಾಯಣ ಮಹಾ ಕಾವ್ಯದಲ್ಲಿ ಮಾತೃ ದೇವೋ ಭವ, ಪಿತೃ ದೇವೋಭವ, ಆಚಾರ್ಯ ದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.

ವಾಲ್ಮೀಕಿ ನಾಯಕ ಸಮಾಜದ ಮಹಿಳಾ  ಅಧ್ಯಕ್ಷರಾದ ಹೆಚ್.ಟಿ.ವನಜಾಕ್ಷಮ್ಮ ಕಾರ್ಯ ನಿರ್ವಹ ಣಾಧಿಕಾರಿ ಚಂದ್ರಶೇಖರ್, ಅಂಬೇಡ್ಕರ್  ಸಮಾಜದ ಅಧ್ಯಕ್ಷ  ನಿಚ್ಚವ್ವನಹಳ್ಳಿ ಭೀಮಪ್ಪ ಮಾತನಾಡಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್  ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ವಾಲ್ಮೀಕಿ ನಾಯಕ ಸಮಾಜದ ಮಾಜಿ  ಅಧ್ಯಕ್ಷ ಕೆ.ಉಚ್ಚೆಂಗೆಪ್ಪ. ಶಿರಹಟ್ಟಿ ದಂಡೆಪ್ಪ,  ಕಾರ್ಯದರ್ಶಿ ಜಿಟ್ಟಿನಕಟ್ಟಿ ಹೆಚ್.ಕೆ.ಮಂಜುನಾಥ, ನ್ಯಾಯವಾದಿ ಎಂ.ಸುರೇಶ. ಉಪಾಧ್ಯಕ್ಷ ಮಂಡಕ್ಕಿ ಸುರೇಶ, ಈಡಿಗ ಸಮಾಜದ ಮುಖಂಡ  ಇ. ದೇವದಾಸ್,  ಪುರಸಭೆ ಸದಸ್ಯರಾದ ಎಂ.ವಿ.ಅಂಜಿನಪ್ಪ, ಟಿ.ವೆಂಕಟೇಶ, ಮುಖಂಡರಾದ ಚಿಕ್ಕೇರಿ ಬಸಪ್ಪ, ನಿಟ್ಟೂರು ಸಣ್ಣಹಾಲಪ್ಪ,  ಸಿ.ಪಿ.ಐ. ನಾಗರಾಜ ಕಮ್ಮಾರ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಇಬ್ರಾಹಿಂ ಸಾಬ್, ಪುರಸಭೆ ಮುಖ್ಯಾಧಿಕಾರಿ  ಎರಗುಡಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಲೇಪಾಕ್ಷಪ್ಪ ಸೇರಿದಂತೆ, ಇತರರು ಇದ್ದರು.

error: Content is protected !!