ದಾವಣಗೆರೆ, ಅ. 21 – ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದ ವರಿಂದ ನಿಗಮದ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವಂಬರ್ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ:08192-233309 ದೂರವಾಣಿ ಮೂಲಕ ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
January 8, 2025