ವಿದ್ಯಾರ್ಥಿಗಳು ಭ್ರಷ್ಟ ವ್ಯವಸ್ಥೆ ವಿರುದ್ಧ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು

ವಿದ್ಯಾರ್ಥಿಗಳು ಭ್ರಷ್ಟ ವ್ಯವಸ್ಥೆ ವಿರುದ್ಧ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಕರೆ

ದಾವಣಗೆರೆ, ಅ. 28- ವಿದ್ಯಾರ್ಥಿಗಳು ಭ್ರಷ್ಠಚಾರದ ವಿರುದ್ಧ ಪ್ರತಿಭಟಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಕರೆ ನೀಡಿದರು.

ನಗರದ ಮಾ.ಸ.ಬ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಶಾಮನೂರು ಪಾರ್ವತಮ್ಮ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ `ದೇಶದ ಅಭಿವೃದ್ಧಿಗಾಗಿ ಭ್ರಷ್ಟಚಾರ ಮುಕ್ತ ಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಸಮಾಜದಲ್ಲಿನ ಭ್ರಷ್ಟಚಾರ ವಿರೋಧಿಸುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ತಾವು ಕೂಡ ಭ್ರಷ್ಟ ವ್ಯವಸ್ಥೆಗೆ ಹೊಂದಿಕೊಳ್ಳದೇ ಪ್ರಾಮಾಣಿಕ ಜೀವನ ನಡೆಸುವ ಕಡೆ ಹೆಜ್ಜೆ ಹಾಕಬೇಕೆಂದು ಹೇಳಿದರು.

ಸರ್ಕಾರದ ಭ್ರಷ್ಟ ಅಧಿಕಾರಿಗಳು ಅಸಮರ್ಥತೆ, ಅಸಹಾಯಕತೆಯನ್ನೇ ಲಾಭವನ್ನಾಗಿಸಿಕೊಳ್ಳುತ್ತಾರೆ. ಸಮಾಜದಲ್ಲಿನ ನಿಯಮಾವಳಿಗಳನ್ನು ಕೂಡ ಅರಿಯಬೇಕೆಂದು ಸಲಹೆ ನೀಡಿದರು.

ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು, ಭ್ರಷ್ಟಚಾರಕ್ಕೆ ಬಲಿಯಾಗದೇ ಸರಿ ದಾರಿಯಲ್ಲಿ ಮುನ್ನಡೆದು ಭ್ರಷ್ಟರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.

ಸರ್ಕಾರದ ಯೋಜನೆ, ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಲಂಚಕ್ಕೆ ಆಸೆ ಪಡದೇ ಸರಳ ಜೀವನಕ್ಕೆ ಮುಂದಾಗಬೇಕು ಎಂದರು.

ವಿದ್ಯಾರ್ಥಿಗಳು ಸಹ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಕರೆ ನೀಡಿದರು.

ಅಧಿಕಾರಿಗಳು ಯೋಜನೆ, ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ವಿಳಂಬ ಧೋರಣೆ ತಾಳಬಾರದದು. 

ಕುಂಟು ನೆಪ ಹೇಳಿ ಕೆಲಸ ಮುಂದಕ್ಕೆ ಹಾಕುವುದು ಸರಿಯಲ್ಲ. ಭ್ರಷ್ಟಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಸಂಸ್ಥೆಯನ್ನು ಹುಟ್ಟುಹಾಕಲಾಗಿದೆ ಎಂದು ತಿಳಿಸಿದರು.

ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಸಿ. ಮಧುಸೂದನ್ ಮಾತನಾಡಿದರು. ಉಪಾಧೀಕ್ಷಕರಾದ ಕಲಾವತಿ, ನಿರೀಕ್ಷಕರಾದ ಪ್ರಭು ಬಿ. ಸೂರಿನ, ಪಿ. ಸರಳ, ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಜಿ.ಸಿ. ನೀಲಾಂಬಿಕೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಆರ್. ರಾಘವೇಂದ್ರ ಮತ್ತಿತರರಿದ್ದರು.

error: Content is protected !!