ದೆಹಲಿಯ ಸಂಸತ್ ಭವನದ ಎದುರು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ದೆಹಲಿಯ ಸಂಸತ್ ಭವನದ ಎದುರು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ನವದೆಹಲಿ, ಅ.23- ನವದೆಹಲಿಯ ಭಾರತ ಸಂಸತ್ ಭವನದ ಎದುರು ನಿರ್ಮಿಸಿರುವ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮಾಜೀಯ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವೀರ ವನಿತೆಯ ಜಯಂತಿ ಹಾಗೂ 200ನೇ ವರ್ಷದ ವಿಜಯೋತ್ಸವವನ್ನು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಮತ್ತು ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ಆಚರಿಸಲಾಯಿತು. 

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಮಾಜಿ ಸಚಿವ ಬಸವನಗೌಡ ಪಾಟೀಲ್   ಯತ್ನಾಳ್, ಅರವಿಂದ್ ಬೆಲ್ಲದ್, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್, ಚಂದ್ರಶೇಖರ ಪೂಜಾರ್ ಹಾಗೂ ಪಂಚಮಸಾಲಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶೇಖರ್ ಸೇರಿದಂತೆ ಇನ್ನೂ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!