ದಾವಣಗೆರೆ, ಅ.25- ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯನ್ನು ನಾಡಿದ್ದು ದಿನಾಂಕ 27ರ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಧ್ಯಕ್ಷರೂ ಆದ ಸಂಸದ ಜಿ.ಸಿ. ಚಂದ್ರಶೇಖರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಾಲತಾಣದ ಉಸ್ತುವಾರಿಗಳು ಸಭೆಯಲ್ಲಿ ಭಾಗವಹಿಸುವಂತೆ ಬಸವರಾಜ್ ಕೋರಿದ್ದಾರೆ.