ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ದ: ಶಾಸಕ ಎಸ್ಸೆಸ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ದ: ಶಾಸಕ ಎಸ್ಸೆಸ್

ಹದಡಿ ಗ್ರಾಮದ ಮನೆಗಳಿಗೆ ನಳ ಸಂಪರ್ಕ ಕಾಮಗಾರಿಗೆ ಚಾಲನೆ

ದಾವಣಗೆರೆ, ನ.3- ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ದರಿದ್ದು, ಸಾರ್ವಜನಿಕರು ಸರ್ಕಾರದ ಯಾವುದೇ ಯೋಜನೆಗಳ ಅನುಷ್ಠಾನಕ್ಕೆ ಅಪಸ್ವರ ಎತ್ತದೇ ಸಹಕಾರ ನೀಡಬೇಕೆಂದು ಶಾಸಕ  ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹದಡಿ ಗ್ರಾಮದ 1700 ಮನೆಗಳಿಗೆ ನಳ ಸಂಪರ್ಕ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರದ ಯಾವುದೇ ಒಂದು ಯೋಜನೆ ಅನುಷ್ಠಾನಕ್ಕೆ ಮೊದಮೊದಲು ಅಪಸ್ವರ ಬರುವುದು ಸಹಜ. ಆದರೆ ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗಳು ಜನರ ಪರವಾಗಿ ಇರಲಿದ್ದು, ಇಂತಹ ಯೋಜನೆಗಳ ಬಗ್ಗೆ ಸಾರ್ವಜನಿಕರು ಅಪಸ್ವರ ಎತ್ತದೇ ಸಹಕಾರ ನೀಡುವಂತೆ ತಿಳಿಸಿದರು.

ಹದಡಿ ಗ್ರಾಮ ಸೇರಿದಂತೆ ನಮ್ಮ ಕ್ಷೇತ್ರ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮಗಳು, ಪಟ್ಟಣಗಳ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದ ಅವರು, ಹದಡಿ ಗ್ರಾಮದ ಕೆರೆ ಹೂಳು ತೆಗೆಯಲು ಮತ್ತು ಗ್ರಾಮದ ಶ್ರೀ ಆಂಜನೇಯ ದೇವಸ್ಥಾನ ನವೀಕರಣಗೊಳಿಸಲು ಸಹಕಾರ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜಿ.ಸಿ.ನಿಂಗಪ್ಪ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಂ.ಬಿ.ಹಾಲಪ್ಪ, ರಾಮಪ್ಪ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪ್ರೇಮಾ ಬಸವರಾಜಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಂ.ಹೆಚ್.ರಾಜಪ್ಪ, ಸಾವಿತ್ರಮ್ಮ, ಗಣಾಚಾರಿ, ಮಾಲತೇಶ್, ಹನುಮಂತಪ್ಪ, ಸಬ್ ಇನ್ಸ್‍ಪೆಕ್ಟರ್ ಶ್ರೀಶೈಲ ಪಟ್ಟಣಶೆಟ್ಟಿ, ಪಿಡಿಓ ಜಗದೀಶ್, ಅಭಿಯಂತರರಾದ ಲೋಹಿತ್‍ಕುಮಾರ್ ಮತ್ತಿತರರಿದ್ದರು.

error: Content is protected !!