ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದಲ್ಲಿರುವ ಹೆಳವನಕಟ್ಟೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆ ಭರ್ತಿಯಾಗಿ ಕೋಡಿ ಬಿದ್ದಿರುವುದರಿಂದ ಗ್ರಾಮಸ್ಥರು ಇದೇ ದಿನಾಂಕ 29 ರಂದು ಕೆರೆಯಲ್ಲಿ ತೆಪ್ಪೋತ್ಸವ ಮತ್ತು ದೇವಸ್ಥಾನದಲ್ಲಿ ದೀಪೋತ್ಸವ ಹಮ್ಮಿಕೊಂಡಿರುವ ಕಾರಣ ಇಂದು ಬೆಳಗ್ಗೆ 11 ಗಂಟೆಗೆ ರಂಗನಾಥ ಸ್ವಾಮಿಗೆ ಕಂಕಣಧಾರಣೆ ಮತ್ತು ಕೆರೆಯ ನಡುಗಡ್ಡೆಯಲ್ಲಿ ಧ್ವಜ ಸ್ತಂಭ ಸ್ಥಾಪನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸುರೇಶ್ ಶಾಸ್ತ್ರಿ ತಿಳಿಸಿದ್ದಾರೆ.
January 18, 2025