ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ, ಆರ್ಥಿಕ ಅನುದಾನಕ್ಕಾಗಿ ಅರ್ಜಿ

ದಾವಣಗೆರೆ, ನ.4- ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರಾಂಕ್‌ ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರಾಂಕ್‌ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿ ಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇದೇ ದಿನಾಂಕ 30ರ ಒಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಮಾಹಿತಿಗಾಗಿ 08182-220925 ಸಂಪರ್ಕಿಸಿ ಅಥವಾ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ  HTTPS://ONLINE.KSB.GOV.IN ವೀಕ್ಷಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ. ಹಿರೇಮಠ ತಿಳಿಸಿದ್ದಾರೆ.

error: Content is protected !!